Publish Date: Tue, 21 Jan 2020 (13:04 IST)
Updated Date: Tue, 21 Jan 2020 (13:08 IST)
ಸಮಸ್ಯೆ: ಸರ್ ನನಗೀಗ 28 ವರ್ಷ. ನನ್ನ ಯಜಮಾನರಿಗೆ 33 ವರ್ಷವಾಗಿದೆ. ಮದುವೆಯಾಗಿ ಎಂಟು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ. ವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ. ನಾವಿಬ್ರೂ ತುಂಬಾ ಚೆನ್ನಾಗಿ ರೋಮ್ಯಾನ್ಸ್ ಮಾಡ್ತೇವೆ. ಹಗಲು ರಾತ್ರಿ ಎನ್ನದೇ ಸುಖ ಅನುಭಿವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ ಎಂಬುದೇ ದೊಡ್ಡ ಚಿಂತೆಯಾಗಿದೆ. ಪರಿಹಾರ ತಿಳಿಸಿ.
ಸಲಹೆ: ನಿಮಗಿನ್ನೂ ಮಕ್ಕಳಾಗುವ ಸಾಧ್ಯತೆ ಇದೆ. ಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲ. ಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆ.
ಸಾಮಾನ್ಯವಾಗಿ ಲೈಂಗಿಕ ಕ್ರಿಯೆಯ ಅಂತ್ಯದಲ್ಲಿ ವೀರ್ಯಾಣು ಅಂಡಾಣುವಿನೊಂದಿಗೆ ಸಂಯೋಗ ಹೊಂದದೇ ಇರುವುದೂ ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇಂಥ ಸಂದರ್ಭಗಳಿಂದ ಅಂಡಾಣು ಫಲಿತವಾಗುವುದು ಕಷ್ಟವಾಗುತ್ತದೆ. ಒಂದು ಋತುಚಕ್ರದ ನಿಗದಿತ ದಿನಗಳಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಲ್ಲಿ ಅಂಡಾಣು ಭ್ರೂಣ ಕಟ್ಟುವಲ್ಲಿ ವಿಫಲವಾಗುತ್ತದೆ. ವಿವಾಹಿತರ ನಡುವೆ ಈ ದಿನಗಳಲ್ಲಿ ಮಿಲನವಾಗದೇ ಇರುವಂಥ ಪರಿಸ್ಥಿತಿಗಳಲ್ಲಿ ಗರ್ಭಧಾರಣೆ ಕಷ್ಟವಾಗುತ್ತದೆ. ತಜ್ಞ ವೈದ್ಯರನ್ನು ಭೇಟಿ ಮಾಡಿ ನಿಗದಿತ ಚಿಕಿತ್ಸೆ ಪಡೆದುಕೊಳ್ಳಿ.