ಸಮಸ್ಯೆ: ಸರ್ ನನಗೀಗ 33 ವರ್ಷ. ನನ್ನ ಯಜಮಾನರಿಗೆ 38ವರ್ಷವಾಗಿದೆ. ಮದುವೆಯಾಗಿ ಆರು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ. ವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ. ನಾವಿಬ್ಬರೂ ತುಂಬಾ ಚೆನ್ನಾಗಿ ಇದ್ದೇವೆ.
ಮಗು ಬೇಕೆಂದು ಹಗಲು ರಾತ್ರಿ ಎನ್ನದೇ ಸುಖ ಅನುಭವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ. ಇದು ನಮಗೆ ದೊಡ್ಡ ಚಿಂತೆಯಾಗಿದೆ. ನಾನು ಹೊಸ ಲವರ್ ನಿಂದ ಮಗು ಪಡೆಯಲು ಮುಂದಾಗಲೇ? ಪರಿಹಾರ ತಿಳಿಸಿ.
ಸಲಹೆ: ನಿಮಗಿನ್ನೂ ಮಕ್ಕಳಾಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲ. ಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆ. ಸಂಭೋಗದ ನಂತರ ಗುಪ್ತಾಂಗದಿಂದ ವೀರ್ಯ ಹೊರಬರುವುದು ಕೂಡಾ ತೀರಾ ಸಹಜ.
ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30ರ ನಂತರ. ಕೆಲವು ಈ ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿಸಮಸ್ಯೆಗಳನ್ನು ಎದುರಿಸುತ್ತಾರೆ.
35 ವರ್ಷಗಳನ್ನು ದಾಟಿರುವ ಮಹಿಳೆಯರು 6 ತಿಂಗಳ ಸತತ ಯತ್ನದ ನಂತರವೂ ಗರ್ಭ ಧರಿಸದೇ ಇದ್ದಲ್ಲಿ ತಮ್ಮ ವೈದ್ಯರೊಂದಿಗೆ ಮತ್ತೊಮ್ಮೆ ಸಮಾಲೋಚಿಸುವುದು ಒಳಿತು. ಮಗುವಿಗಾಗಿ ಅನೈತಿಕ ಸಂಬಂಧಕ್ಕೆ ಮುಂದಾಗುವುದು ಸರಿಯಲ್ಲ.