ಬೆಂಗಳೂರು : ಮಾವಿನ ಹಣ್ಣನ್ನು ಎಲ್ಲರೂ ಇಷ್ಟಪಡುತ್ತಾರೆ. ಇದರಲ್ಲಿ ಜೀವಸತ್ವ ಹಾಗೂ ಕಬ್ಬಿಣಾಂಶಗಳು ಸಮೃದ್ಧವಾಗಿರುತ್ತದೆ. ಆದರೆ ಈ ಸಮಸ್ಯೆಯಿಂದ ಬಳಲುತ್ತಿರುವವರು ಮಾವಿನ ಹಣ್ಣನ್ನು ತಿನ್ನುವುದು ತುಂಬಾ ಅಪಾಯಕಾರಿ.
*ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿರುವವರು ಮಾವಿನ ಹಣ್ಣನ್ನು ಸೇವಿಸಬಾರದು.
*ಸ್ಥೂಲಕಾಯ ಸಮಸ್ಯೆಯಿಂದ ಬಳಲುತ್ತಿರುವವರು ಮಾವಿನ ಹಣ್ಣನ್ನು ತಿನ್ನಬಾರದು. ಯಾಕೆಂದರೆ ಇದು ದೇಹದ ತೂಕವನ್ನು ಹೆಚ್ಚಿಸುವ ಕ್ಯಾಲೋರಿಗಳನ್ನು ಹೊಂದಿರುತ್ತದೆ.
*ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದರಿಂದ ಮಧುಮೇಹ ಸಮಸ್ಯೆ ಇರುವವರು ಇದನ್ನು ಸೇವನೆ ಮಾಡಿದರೆ ಅಪಾಯ.
* ಮೊಡವೆಗಳು, ಚರ್ಮದ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರು ಮಾವಿನ ಹಣ್ಣನ್ನು ಸೇವಿಸಬೇಡಿ.