Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಾಸಿವೆ ಎಣ್ಣೆಯನ್ನು ಕೂದಲಿಗೆ ಹಚ್ಚಿದ್ರೆ ಏನಾಗುತ್ತದೆ ಗೊತ್ತಾ?

ಸಾಸಿವೆ ಎಣ್ಣೆಯನ್ನು ಕೂದಲಿಗೆ ಹಚ್ಚಿದ್ರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಸೋಮವಾರ, 24 ಜೂನ್ 2019 (08:08 IST)
ಬೆಂಗಳೂರು : ಸಾಸಿವೆ ಎಣ್ಣೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದ್ದರಿಂದ ಇದನ್ನು ಅಡುಗೆಗೆ ಬಳಸುತ್ತಾರೆ. ಹಾಗೇ ಇದು ಚರ್ಮದ ಆರೋಗ್ಯಕ್ಕೂ ಕೂಡ ಉತ್ತಮ. ಆದರೆ ಇದನ್ನು ಕೂದಲಿಗೆ ಹಚ್ಚಬಹುದೇ ಎಂಬ ಗೊಂದಲ ಹಲವರಲ್ಲಿದೆ. ಸಾಸಿವೆ ಎಣ್ಣೆ ಕೂದಲಿಗೆ ಹಚ್ಚುವುದರಿಂದ ಹಲವು ಪ್ರಯೋಜನಗಳಿವೆ.



* ಸಾಸಿವೆ ಎಣ್ಣೆಯನ್ನು ಕೂದಲಿಗೆ ಬಳಸಿದರೆ ವಯಸ್ಸಾದರೂ ಕೂದಲು ಬೆಳ್ಳಗಾಗುವುದಿಲ್ಲ.

 

* ಸಾಸಿವೆ ಎಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಒಣ ಕೂದಲಿನ ಸಮಸ್ಯೆ ನಿವಾರಣೆಯಾಗಿ ಕೂದಲು ತೇವಾಂಶದಿಂದ ಕೂಡಿರುತ್ತದೆ. ಹಾಗೇ ಕೂದಲು ಸಿಕ್ಕಾಗುವುದು ಕಡಿಮೆಯಾಗುತ್ತದೆ.

 

*ಈ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ತಲೆಹೊಟ್ಟು ಸಮಸ್ಯೆ ನಿವಾರಣೆಯಾಗುತ್ತದೆ.

 

* ಸಾಸಿವೆ ಎಣ್ಣೆಯಲ್ಲಿ ವಿಟಮಿನ್ಗಳು ಒಮೆಗಾ 3 ಕೊಬ್ಬಿನ ಆಮ್ಲಗಳು ಇರುವುದರಿಂದ ಇದು ಕೂದಲು ಉದ್ದವಾಗಿ ಬೆಳೆಯಲು ಸಹಕಾರಿಯಾಗಿದೆ.

 

* ಸಾಸಿವೆ ಎಣ್ಣೆಯನ್ನು ಕೂದಲಿಗೆ ಬಳಸುವುದರಿಂದ ಕೂದಲು ತುಂಡಾಗುವುದನ್ನು ತಡೆಯುತ್ತದೆ. ಹಾಗೇ ಕೂದಲುದುರುವ ಸಮಸ್ಯೆ ದೂರವಾಗುತ್ತದೆ.

 

* ಒಂದು ಟೇಬಲ್ ಚಮಚ ತೆಂಗಿನ ಎಣ್ಣೆಗೆ ಟೇಬಲ್ ಚಮಚ ಬಿಸಿ ಸಾಸಿವೆ ಎಣ್ಣೆಯನ್ನು ಬೆರೆಸಿ. ಈ ಮಿಶ್ರಣವನ್ನು ಕೂದಲ ಬುಡಕ್ಕೆ ಲೇಪಿಸಿ ತದನಂತರ ಇದನ್ನು 10 ನಿಮಿಷ ನೆನೆಯಲು ಬಿಡಿ, ನಂತರ ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.ಇದರಿಂದ ಕೂದಲು ಹೊಳಪಿನಿಂದ ಕೂಡಿರುತ್ತದೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ನೀವು ಹಸ್ತ ಮೈಥುನ ಹೇಗೆ ಮಾಡಿಕೊಳ್ಳುವಿರಿ?