ಆರೋಗ್ಯ : ಮಧುಮೇಹ ಮತ್ತು ಹೃದ್ರೋಗದಂತಹ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುರಕ್ಷಿತ ವ್ಯಾಪ್ತಿಯಲ್ಲಿ ಇಡುವುದರ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕಾಫಿಯನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕಂತೆ.
ಆಹಾರದ ಮೊದಲು ಸೇವಿಸುವ ಬ್ಲ್ಯಾಕ್ ಕಾಫಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಏರುಪೇರು ಮಾಡಬಹುದು ಎಂದು ಹೊಸ ಅಧ್ಯಯನದಿಂದ ತಿಳಿದು ಬಂದಿದೆ. ಬಾತ್ ವಿಶ್ವವಿದ್ಯಾಲಯದ (ಯುಕೆ) ನ್ಯೂಟ್ರಿಷನ್, ವ್ಯಾಯಾಮ ಮತ್ತು ಚಯಾಪಚಯ ಕೇಂದ್ರದ ಸಂಶೋಧನೆಯು ಮುಂಜಾನೆಯ ಕಾಫಿಯಿಂದ ಆಗುವ ಆರೋಗ್ಯದ ಸಮಸ್ಯೆಗಳನ್ನು ಹಾಗೂ ಪರಿಣಾಮವನ್ನು ಗಮನಿಸಿದೆ. ರಾತ್ರಿಯ ಕಳಪೆ ನಿದ್ರೆಯು ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಸೀಮಿತ ಪರಿಣಾಮ ಬೀರುತ್ತದೆ. ನಿದ್ರೆಯಿಂದ ನಿಮ್ಮನ್ನು ಪ್ರಚೋದಿಸುವ ಮಾರ್ಗವಾಗಿ ಕಾಫಿ ಕುಡಿಯುವುದರಿಂದ ರಕ್ತದಲ್ಲಿನ ಗ್ಲೂಕೋಸ್ (ಸಕ್ಕರೆ) ನಿಯಂತ್ರಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಬ್ರಿಟಿಷ್ ಜರ್ನಲ್ ಆಫ್ ನ್ಯೂಟ್ರಿಷನ್ ವಿಜ್ಞಾನಿಗಳು ತಿಳಿಸಿದ್ದಾರೆ. ಮಧುಮೇಹ ಮತ್ತು ಹೃದ್ರೋಗದಂತಹ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುರಕ್ಷಿತ ವ್ಯಾಪ್ತಿಯಲ್ಲಿ ಇಡುವುದರ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕಾಫಿಯನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು ಎಂದು ವಿಜ್ಞಾನಿಗಳು ಹೇಳುತ್ತಾರೆ.