ಬೆಂಗಳೂರು: ಸೀಬೇಕಾಯಿ ಸುಲಭವಾಗಿ ಸಿಗುವ ಹಣ್ಣು. ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಸೀಬೇಕಾಯಿ ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಎಷ್ಟು ಉಪಯುಕ್ತ ಎಂದು ಗೊತ್ತಾ?
ರೋಗ ನಿರೋಧ ಶಕ್ತಿ
ಸೀಬೇಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹಾಗಾಗಿ ಇದು ಉತ್ತಮ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ.
ಕ್ಯಾನ್ಸರ್ ದೂರ ಮಾಡುತ್ತದೆ
ಸೀಬೇಕಾಯಿಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕಣಗಳು ಬೆಳೆಯದಂತೆ ನೋಡಿಕೊಳ್ಳುತ್ತದೆ. ಅದರಲ್ಲೂ ವಿಶೇಷವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಬಾರದಂತೆ ತಡೆಯುತ್ತದೆ.
ಹೃದಯ ಕಾಪಾಡುತ್ತದೆ
ಸೀಬೇಕಾಯಿ ದೇಹದಲ್ಲಿ ಸೋಡಿಯಂ ಮತ್ತು ಪೊಟೇಶಿಯಂ ಅಂಶವನ್ನು ಸಮತೋಲದಲ್ಲಿರಿಸುತ್ತದೆ. ಇದರಿಂದ ಸಹಜವಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಸಹಜವಾಗಿ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.
ಮಲಬದ್ಧತೆ
ಸೀಬೇಕಾಯಿ ನಮ್ಮ ದೇಹಕ್ಕೆ ಅಗತ್ಯವಾದ ನಾರಿನಂಶ ಒದಗಿಸಬಲ್ಲದು. ಹಾಗಾಗಿ ಇದು ಜೀರ್ಣಕ್ರಿಯೆಯನ್ನೂ ಸುಗಮಗೊಳಿಸುತ್ತದೆ. ಇದರಿಂದಾಗಿ ಮಲಬದ್ಧತೆ ಸಮಸ್ಯೆ ದೂರವಾಗಬಹುದು.
ಕಣ್ಣಿನ ಆರೋಗ್ಯ
ಸೀಬೇಕಾಯಿಯಲ್ಲಿ ವಿಟಮಿನ್ ಎ ಅಂಶವೂ ಬೇಕಾದಷ್ಟಿರುವ ಕಾರಣ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ದೃಷ್ಟಿ ಚುರುಕುಗೊಳ್ಳಬೇಕಾದರೆ ದಿನಕ್ಕೊಂದು ಸೀಬೇಕಾಯಿ ತಪ್ಪದೇ ತಿನ್ನಿ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ