ಬೆಂಗಳೂರು : ಹೆಚ್ಚಿನವರಿಗೆ ರಾತ್ರಿ ವೇಳೆ ಕಾಲು ಸೆಳೆತ ಉಂಟಾಗುತ್ತದೆ. ಇದರಿಂದ ರಾತ್ರಿ ನಿದ್ದೆ ಮಾಡಲು ಆಗುವುದಿಲ್ಲ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್ (ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದನ್ನು ಮನೆಮದ್ದಿನಿಂದ ನಿವಾರಿಸಿಕೊಳ್ಳಬಹುದು.
ವಿಂಟರ್ ಗ್ರೀನ್ ಆಯಿಲ್ : ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಆಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ನೀರು : ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು.
ಸ್ಟ್ರೆಚಿಂಗ್ : ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.