ಬೆಂಗಳೂರು : ಕಡಲೆ ಹಿಟ್ಟನ್ನು ಸಿಹಿತಿಂಡಿ, ಆಹಾರ ತಯಾರಿಕೆಯಲ್ಲಿ ಬಳಸುತ್ತಾರೆ. ಇದು ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಹಾಗಾದ್ರೆ ಕಡಲೆಹಿಟ್ಟಿನಿಂದಾಗುವ ಉಪಯೋಗ ಏನೆಂಬುದನ್ನು ತಿಳಿದುಕೊಳ್ಳಿ.
ಕ್ಯಾನ್ಸರ್ , ಮಧುಮೇಹ ಮತ್ತು ತೂಕ ಹೆಚ್ಚಳದ ಸಮಸ್ಯೆಯನ್ನು ನಿವಾರಿಸುತ್ತದೆ. ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರು ಕಡಲೆಹಿಟ್ಟನ್ನು ಸೇವಿಸಿದರೆ ಈ ಸಮಸ್ಯೆಯಿಂದ ಮುಕ್ತಿಹೊಂದಬಹುದಂತೆ. ಇದು ಕೂಡ ಸಂಶೋಧನೆಯಿಂದ ತಿಳಿದುಬಂದಿದೆ.
ತಜ್ಞರ ಪ್ರಕಾರ ಕಡಲೆಹಿಟ್ಟಿನಲ್ಲಿರುವ ಗ್ಲೈಸೆಮಿಕ್ ಸೂಚ್ಯಂಕ ತುಂಬಾ ಕಡಿಮೆ. ಆದ್ದರಿಂದ ಮಧುಮೇಹಿ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಕ್ಯಾನ್ಸರ್ ಮತ್ತು ಹೃದ್ರೋಗಕ್ಕೆ ಔಷಧವಾಗಿಯೂ ಕಾರ್ಯನಿರ್ವಹಿಸುತ್ತದೆ.