ಬೆಂಗಳೂರು : ಹೆಚ್ಚಾಗಿ ಎಲ್ಲರ ಮನೆಯಲ್ಲೂ ಸಾಸಿವೆಯನ್ನು ಅಡುಗೆಗೆ ಬಳಸುತ್ತಾರೆ. ಆದರೆ ಇದು ಅಡುಗೆಗೆ ಮಾತ್ರವಲ್ಲ ಇದರ ಎಣ್ಣೆಯಿಂದ ದೇಹಕ್ಕೆ ಮಸಾಜ್ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ.
ಎದೆಯಲ್ಲಿ ಕಫ ಕಟ್ಟಿಕೊಂಡಾಗ ಎದೆ ಮತ್ತು ಬೆನ್ನಿಗೆ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡಿದರೆ ಕಫ ಕರಗಿಹೋಗುತ್ತದೆ. ನಿಂತುಕೊಂಡು ಕೆಲಸ ಮಾಡುವವರ ಪಾದಗಳಲ್ಲಿ ನೋವು ಕಾಣಿಸಿಕೊಂಡರೆ ಅವರ ಪಾದಗಳಿಗೆ ಈ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡಿದರೆ ನೋವು ನಿವಾರಣೆಯಾಗುತ್ತದೆ.
ಹಾಗೇ ಮಂಡಿ ನೋವಿರುವವರು ದೇಹಕ್ಕೆ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡಿದರೆ ನೋವು ನಿವಾರಣೆಯಾಗುತ್ತದೆ. ಅಲ್ಲದೇ ಚಳಿಗಾಲದಲ್ಲಿ ಕಾಡುವ ಒಣ ಚರ್ಮ ಸಮಸ್ಯೆ ನಿವಾರಣೆಯಾಗಲು ಸಾಸಿವೆ ಎಣ್ಣೆ ಹಚ್ಚಿ ಸ್ನಾನ ಮಾಡಿ.