Publish Date: Sat, 13 Jul 2019 (05:56 IST)
Updated Date: Sat, 13 Jul 2019 (05:57 IST)
ಬೆಂಗಳೂರು : ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಕೂಡ ಮೊಡವೆಗಳ ಸಮಸ್ಯೆ ಕಾಡುತ್ತದೆ. ಪರಿಸರ, ಜೀವನಶೈಲಿ, ತಲೆಹೊಟ್ಟು, ಮತ್ತು ಅನುವಂಶಿಕ ಕಾರಣಗಳಿಂದ ಮೊಡವೆ ಸಮಸ್ಯೆ ಉಂಟಾಗುತ್ತದೆ. ಆದಕಾರಣ ಪುರುಷರು ಈ ಮೊಡವೆಗಳ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.
ಒಂದು ಸಣ್ಣ ಕಪ್ ನಲ್ಲಿ ಮೊಸರು ಮತ್ತು ಎರಡು ಚಮಚ ಕಡಲೆ ಹಿಟ್ಟು ಸೇರಿಸಿ ಹಾಗೂ ದಪ್ಪ ಹದದಲ್ಲಿ ಪೇಸ್ಟ್ ತಯಾರಿಸಿ. ಈ ಪ್ಯಾಕ್‌ನ್ನು ನಿಮ್ಮ ಮುಖದ ಮೇಲೆ ಸಮವಾಗಿ ಹಚ್ಚಿ ಮತ್ತು 30-45 ನಿಮಿಷಗಳ ಕಾಲ ಒಣಗಲು ಬಿಡಿ. ಇದು ಸಂಪೂರ್ಣವಾಗಿ ಒಣಗಿದ ನಂತರ, ನೀರನ್ನು ಹಾಕಿ ನಿಮ್ಮ ಮುಖದ ಮೇಲೆ ವೃತ್ತಾಕಾರದ ಚಲನೆಯಲ್ಲಿ ಮಸಾಜ್ ಮಾಡಿ. ನಂತರ ಚೆನ್ನಾಗಿ ಮುಖವನ್ನು ತೊಳೆದು ಉತ್ತಮ ಮಾಯಿಶ್ಚರೈಸರ್ ಅನ್ನು ನಿಮ್ಮ ಮುಖಕ್ಕೆ ಹಚ್ಚಿ.
ಸೌತೆಕಾಯಿಯನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ರೋಸ್ ವಾಟರ್ ಮತ್ತು 1 ಚಮಚ ಗ್ಲಿಸರಿನ್ ಹಾಕಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಬೇಕು. 20 ನಿಮಿಷದ ಬಳಿಕ ತಣ್ಣೀರಿನಿಂದ ಮುಖ ತೊಳೆದರೆ ಮುಖದ ಕಾಂತಿ ಹೆಚ್ಚುವುದು.