Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು , ಸೋಮವಾರ, 1 ನವೆಂಬರ್ 2021 (09:46 IST)
ತೀವ್ರ ಅನಾರೋಗ್ಯದಿಂದ  ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಸೂಪರ್ ಸ್ಟಾರ್ ರಜನಿಕಾಂತ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದೇ ಅಕ್ಟೋಬರ್ 28ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ರಜನಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು, ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೂರು ದಿನಗಳ ಕಾಲ ಚಿಕಿತ್ಸೆ ಪಡೆದ ನಟ ರಜನಿ ಕಾಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸದ್ಯ ಡಿಸ್ಚಾರ್ಜ್ ಆಗಿ ಮನೆಗೆ ಹಿಂದಿರುಗಿದ್ದಾರೆ..

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು:ತಮಿಳು ನಟ ವಿಶಾಲ್