Webdunia - Bharat's app for daily news and videos

Install App

ಸಮಾರಂಭದಲ್ಲಿ ಕಾಲ್ತುಳಿತಕ್ಕೆ ಮಹಿಳೆ, ಮಕ್ಕಳು ಸೇರಿದಂತೆ 85 ಮಂದಿ ಸಾವು!

Webdunia
ಶನಿವಾರ, 22 ಏಪ್ರಿಲ್ 2023 (08:57 IST)
ಸನಾ : ನೆರವು ನೀಡುವ ಸಮಾರಂಭದಲ್ಲಿ ನಡೆದ ಕಾಲ್ತುಳಿತದಲ್ಲಿ 85 ಮಂದಿ ಸಾವನ್ನಪ್ಪಿದ ಘಟನೆ ಯೆಮೆನ್ನಲ್ಲಿ ನಡೆದಿದೆ.

ಯೆಮೆನ್ ರಾಜಧಾನಿ ಸನಾದ ಬಾಬ್ ಅಲ್-ಯೆಮೆನ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ರಂಜಾನ್ ನಿಮಿತ್ತ ಶಾಲೆಯಲ್ಲಿ ಬಡಜನರಿಗೆ ನೆರವು ನೀಡಲು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಒಬ್ಬರಿಗೆ 5,000 ಯೆಮೆನಿ ರಿತಾಲ್ಸ್ (1,600 ರೂ), ಬಟ್ಟೆ, ಆಹಾರ ಸೇರಿ ಇನ್ನಿತರೆ ನೆರವನ್ನು ನೀಡುತ್ತಿದ್ದರು.

 
ಕಾರ್ಯಕ್ರಮದಲ್ಲಿ ನೀಡಲಾದ ಸೌಲಭ್ಯವನ್ನು ಪಡೆಯಲು ಹಲವಾರು ಜನರು ಭಾಗಿಯಾಗಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತದದಲ್ಲಿ ಕನಿಷ್ಠ 85 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 322 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

ಸ್ಥಳೀಯ ಆಡಳಿತದ ಸಹಾಯವಿಲ್ಲದೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ವಿತಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments