Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಮೆಜಾನ್ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ

ಅಮೆಜಾನ್ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ
ವಾಷಿಂಗ್ಟನ್ , ಶುಕ್ರವಾರ, 24 ಮಾರ್ಚ್ 2023 (15:10 IST)
ವಾಷಿಂಗ್ಟನ್ : ಇ-ಕಾಮರ್ಸ್ ದೈತ್ಯ ಅಮೆಜಾನ್ ಈ ವರ್ಷದ 2ನೇ ಸುತ್ತಿನ ಉದ್ಯೋಗಿಗಳ ಕಡಿತವನ್ನು ಘೋಷಿಸಿದೆ. ಕಳೆದ ಬಾರಿ 18,000 ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದ ಅಮೆಜಾನ್ ಈ ಬಾರಿ 9,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿದೆ.
 
ಅಮೆಜಾನ್ ಸಿಇಒ ಆಂಡಿ ಜಾಸ್ಸಿ ತನ್ನ ಉದ್ಯೋಗಿಗಳಿಗೆ ಪತ್ರ ಬರೆದು, ವಜಾಗೊಳಿಸುತ್ತಿರುವ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಕಳೆದ 3 ತಿಂಗಳುಗಳಿಂದ ಕಂಪನಿ 27,000ಕ್ಕೂ ಅಧಿಕ ಉದ್ಯೋಗಿಗಳನ್ನು ಕಡಿತಗೊಳಿಸುತ್ತಿದೆ. ಇದು ಕಂಪನಿಯ ಇತಿಹಾಸದಲ್ಲೇ ಅತಿ ದೊಡ್ಡ ವಜಾ ಆಗಿದೆ.

ಅನಿಶ್ಚಿತ ಆರ್ಥಿಕತೆ ಹಾಗೂ ಭವಿಷ್ಯದ ಕಾರಣದಿಂದ ಕಂಪನಿ ತನ್ನ ವೆಚ್ಚಗಳನ್ನು ಹೆಚ್ಚು ಸುವ್ಯವಸ್ಥಿತವಾಗಿಡಲು ಯೋಜಿಸುತ್ತಿದೆ. ಇದರ ಪರಿಣಾಮವಾಗಿ ಕಂಪನಿಯ ಕೆಲ ಸ್ಥಾನಗಳನ್ನು ತೆಗೆದುಹಾಕಲಾಗುತ್ತಿದೆ. ಈ ಹಿಂದೆ ಘೋಷಿಸಲಾಗಿದ್ದ 18,000 ಉದ್ಯೋಗಿಗಳ ವಜಾದೊಂದಿಗೆ 9,000 ಉದ್ಯೋಗಿಗಳ ಕಡಿತವನ್ನೂ ಮಾಡಲಾಗುತ್ತಿದೆ ಎಂದು ಆಂಡಿ ಜಾಸ್ಸಿ ತಮ್ಮ ಉದ್ಯೋಗಿಗಳಿಗೆ ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮರಣದಂಡನೆ : ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್