ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಪದೇ ಪದೇ ಗೈರುಹಾಜರಾಗುತ್ತಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.
ಆರೋಪಿ ನವಾಜ್ ಷರೀಫ್ ಪತ್ನಿ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಿಂದ ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು ಎನ್ನುವ ಷರೀಫ್ ಪರ ವಕೀಲರ ಮನವಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ಬಷೀರ್ ತಿರಸ್ಕರಿಸಿದ್ದಾರೆ.
ಮುಂಬರುವ ನವೆಂಬರ್ 3 ರಂದು ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ಷರೀಫ್‌ಗೆ ಜಾಮೀನು ದೊರೆಯದಿದ್ದಲ್ಲಿ, ಷರೀಫ್ ಪಾಕಿಸ್ತಾನಕ್ಕೆ ಆಗಮಿಸುತ್ತಿದ್ದಂತೆ ಬಂಧನಕ್ಕೆ ಒಳಗಾಗಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್, ಬಂಧನ ಭೀತಿಯನ್ನು ಎದುರಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.