ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೂನ್ ತಿಂಗಳ ಅಂತ್ಯದಲ್ಲಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸೌದಿ ಅರೇಬಿಯಾ ತೈಲ ಉತ್ಪಾದನೆಯ ಹೆಚ್ಚಳಕ್ಕೆ ಸಮ್ಮತಿ ನೀಡಿ ಹಾಗೂ ಯುದ್ಧ ಪೀಡಿತ ಯೆಮನ್ನಲ್ಲಿ ತನ್ನ ಒಪ್ಪಂದವನ್ನು ವಿಸ್ತರಿಸಲು ಸಹಾಯ ಮಾಡುವುದಾಗಿ ಹೇಳಿದ ಬೆನ್ನಲ್ಲೇ ಬೈಡನ್ ಸೌದಿ ಅರೇಬಿಯಾ ಪ್ರವಾಸ ಕೈಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಬೈಡನ್ ಮಧ್ಯಪ್ರಾಚ್ಯ ದೇಶದ ನಾಯಕರೊಡನೆ ಮಾತುಕತೆ ನಡೆಸಲು ಮುಂದಾಗುತ್ತಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಹೇಳಿಕೆ ನೀಡಿದ್ದಾರೆ. ಅವರು ಈ ತಿಂಗಳು ನ್ಯಾಟೋ ಶೃಂಗಸಭೆ, ಹಾಗೂ ಜರ್ಮನಿಯಲ್ಲಿ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಯೋಜಿಸಿದ್ದಾರೆ.