ಇಸ್ಲಾಮಬಾದ್ : ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್ಮೇಲ್ ಮಾಡುತ್ತಿದ್ದ ಎಂದು ಪೊಲೀಸ್ ಕಿವಿ, ತುಟಿ ಮತ್ತು ಮೂಗನ್ನು ಕಟ್ ಮಾಡಿದ ಸುದ್ದಿಯೊಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ಲಾಹೋರ್ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯಲ್ಲಿ ಆರೋಪಿ ಮುಹಮ್ಮದ್ ಇಫ್ತಿಕರ್ ತನ್ನ ಸಹಚರರೊಂದಿಗೆ ಪೊಲೀಸ್ ಕಾನ್ಸ್ಟೆಬಲ್ ಖಾಸಿಂ ಹಯಾತ್ಗೆ ತೀವ್ರ ಚಿತ್ರಹಿಂಸೆ ಕೊಟ್ಟಿದ್ದಾನೆ. ನಂತರ ಆತನ ಮೂಗು, ಕಿವಿ ಮತ್ತು ತುಟಿಗಳನ್ನು ಕತ್ತರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.
ಇಫ್ತಿಕಾರ್, ಹಯಾತ್ಗೆ ತನ್ನ ಪತ್ನಿಗೆ ಬ್ಯಾಕ್ಮೇಲ್ ಮಾಡುತ್ತಿರುವುದು ತಿಳಿದು ಕಳೆದ ತಿಂಗಳು ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ಆದರೆ ಅದರಿಂದ ಏನು ಪ್ರಯೋಜನವಾಗಿಲ್ಲ.
ಅದಕ್ಕೆ ಇಫ್ತಿಕಾರ್, 12 ಮಂದಿ ಸಹಚರರೊಂದಿಗೆ ಸೇರಿಕೊಂಡು ಹಯಾತ್ ಮನೆಗೆ ಹಿಂದಿರುಗುತ್ತಿದ್ದಾಗ ಆತನನ್ನು ಅಪಹರಿಸಿ ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆತನಿಗೆ ತೀವ್ರ ಚಿತ್ರಹಿಂಸೆ ನೀಡಿ ನಂತರ ಆತನ ದೇಹದ ಭಾಗಗಳನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.