Publish Date: Thu, 18 Aug 2022 (16:14 IST)
Updated Date: Thu, 18 Aug 2022 (16:18 IST)
ಕಾಬೂಲ್ : ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನ ಮಸೀದಿಯ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟದ ಬಗ್ಗೆ ಭದ್ರತಾ ಇಲಾಖೆ ಬಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.