ಬೀಜಿಂಗ್: ದ್ವಿಪಕ್ಷೀಯ ಬಾಂಧವ್ಯವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಭಾರತದ ಸಕಾರಾತ್ಮಕ ನಡೆಯನ್ನು ಚೀನಾ ಸ್ವಾಗತಿಸಿದೆ.
'ಸಾಮಾನ್ಯತೆಗಳ ಆಧಾರದ ಮೇಲೆ ಪರಸ್ಪರ ಸಂಬಂಧಗಳನ್ನು ಬೆಳೆಸುವ ಭಾಗವಾಗಿ ಚೀನಾದೊಂದಿಗೆ ಕೆಲಸ ಮಾಡಲು ತಾನು ಸಿದ್ಧ,' ಎಂಬ ಭಾರತದ ಹೇಳಿಕೆ ಬೆನ್ನಲ್ಲೆ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಲು ಕಾಂಗ್ಸ್ , ಭಾರತದ ನಡೆಯನ್ನು ಸ್ವಾಗತಿಸಿದ್ದಾರೆ.
ಚೀನಾ ವಿದೇಶಾಂಗ ವ್ಯವಹಾರಗಳ ಸಚಿವ ವಾಂಗ್ ಯೀ ಅವರು ‘ಭಾರತ ಮತ್ತು ಚೀನಾ ತಮ್ಮ ಅನುಮಾನಗಳನ್ನು ದೂರ ತಳ್ಳಿ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಪರಸ್ಪರ ಕೈಜೋಡಿಸಬೇಕು,'' ಎಂದು ಈ ಹಿಂದೆ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಒಪ್ಪಿಗೆ ಸೂಚಿಸಿರುವ ಭಾರತ, ಚೀನಾದೊಂದಿಗಿನ ದ್ವಿಪಕ್ಷೀಯ ಬಾಂಧವ್ಯ ಉತ್ತಮ ಪಡಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಹೆಜ್ಜೆ ಇರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ