ನ್ಯೂಯಾರ್ಕ್: ಅಮೆರಿಕಾಗೆ ಉದ್ಯೋಗಕ್ಕಾಗಿ ವಲಸೆ ಹೋಗುವ ವಿದೇಶಿಯರಿಗೆ ತಾತ್ಕಾಲಿಕವಾಗಿ ತಡೆ ನೀಡಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ.
ಕೊರೋನಾದಿಂದಾಗಿ ದೇಶದ ನಾಗರಿಕರಿಗೆ ಉದ್ಯೋಗದ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ದೇಶದ ನಾಗರಿಕರಿಗೆ ಅನುಕೂಲ ಮಾಡಿಕೊಡಲು ವಿದೇಶೀ ವಲಸಿಗರಿಗೆ ಮುಂದಿನ ಎರಡು ತಿಂಗಳ ಮಟ್ಟಿಗೆ ತಡೆ ವಿಧಿಸಿರುವುದಾಗಿ ಟ್ರಂಪ್ ಘೋಷಿಸಿದ್ದಾರೆ.
ಟ್ರಂಪ್ ಘೋಷಣೆ ಭಾರತೀಯ ಐಟಿ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಆದರೆ ಸದ್ಯದ ಮಟ್ಟಿಗೆ ಇದು ಅನಿವಾರ್ಯ ಎಂದು ಟ್ರಂಪ್ ಟ್ವಿಟರ್ ನಲ್ಲಿ ಘೋಷಣೆ ಮಾಡಿದ್ದಾರೆ.