ಟೋಕಿಯೋ : ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಹತ್ತಿರದಲ್ಲೇ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ.
ಪಶ್ಚಿಮ ಜಪಾನ್ನ ವಕಯಾಮಾದಲ್ಲಿ ಕಿಶಿಡಾ ಭಾಷಣ ಮಾಡುತ್ತಿದ್ದರು. ಈ ವೇಳೆ ಪ್ರಧಾನಿಯೆಡೆಗೆ ಸ್ಫೋಟಕ ವಸ್ತುವನ್ನು ಎಸೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ತಕ್ಷಣವೇ ಕಿಶಿಡಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ ಪ್ರಧಾನಿ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಅವರೆಡೆಗೆ ಎಸೆಯಲಾಗಿದೆ. ಈ ವೇಳೆ ಸ್ಥಳದಲ್ಲಿ ಹೊಗೆ ಕಾಣಿಸಿಕೊಂಡಿದೆ. ಸದ್ಯ ಘಟನಾ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಧಿಕಾರಿಗಳು ಸ್ಥಳದಲ್ಲಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.