Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಖಾಸಗಿ ವಿಮಾನವೊಂದು ಪತನಗೊಂಡ ಪರಿಣಾಮ ಒಂಭತ್ತು ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೋ ಡೊಮಿಂಗೊದಲ್ಲಿ ನಡೆದಿದೆ.
ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೋ ಡೊಮಿಂಗೊದಲ್ಲಿರುವ ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತುರ್ತು ಲ್ಯಾಂಡಿಂಗ್ ಮಾಡುವ ವೇಳೆ ಬುಧವಾರ ರಾತ್ರಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ವಿಮಾನಯಾನ ಕಂಪನಿ ಹೆಲಿಡೋಸಾ ಏವಿಯೇಷನ್ ಗ್ರೂಪ್ ಅಪಘಾತವನ್ನು ದೃಢಪಡಿಸಿದ್ದು, ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿರುವ ವಿಮಾನ ದುರಂತ ವಿಷಾದಕರ.
ಈ ಅಪಘಾತದಲ್ಲಿ ಎಲ್ಲ ಸಿಬ್ಬಂದಿ ಮತ್ತು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.