ಕಾಬೂಲ್ : ಮಾಜಿ ಪತ್ರಕರ್ತೆ, ಟಿ.ವಿ. ನಿರೂಪಕಿಯೊಬ್ಬರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಶನಿವಾರ ಕಾಬೂಲ್ ನಲ್ಲಿ ನಡೆದಿದೆ.
ಮೀನಾ ಮಂಗಲ್ ಗುಂಡಿನ ದಾಳಿಗೆ ಬಲಿಯಾದ ಪತ್ರಕರ್ತೆ. ಈಕೆ ಸ್ಥಳೀಯ ಟಿವಿ ವಾಹಿನಿಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. ಮಾತ್ರವಲ್ಲ ಆಫ್ಘಾನಿಸ್ತಾನ ಪಾರ್ಲಿಮೆಂಟ್ ಸಾಂಸ್ಕೃತಿಕ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೀನಾ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ತಮ್ಮ ಮನೆಯಲ್ಲಿ ಇದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಏಕಾಏಕಿ ಗುಂಡು ಹಾರಿಸಿ ದಾಳಿ ನಡೆಸಿದ್ದಾರೆ. ಇದರ ಪರಿಣಾಮ ಮೀನಾ ಸಾವನಪ್ಪಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.