ವಾಷಿಂಗ್ ಟನ್ : ಅಮೆರಿಕದಲ್ಲಿ ಕ್ರಿಸ್‍ಮಸ್ ತಯಾರಿ ಜೋರಾಗಿ ನಡೆಯುತ್ತಿದ್ದು, ಅಮೇರಿಕಾದ ಮಾಜಿ ಅಧ್ಯಕ್ಷರೊಬ್ಬರು ಸಾಂತಾ ಕ್ಲಾಸ್ ವೇಷ ಧರಿಸಿ, ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಉಡುಗೊರೆಗಳನ್ನು ಹಂಚಿದ್ದಾರೆ.
ಹೌದು. ತಮ್ಮ ಸರಳತೆಯಿಂದ ಹೆಸರಾದ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮ್ ಅವರು ಕ್ರಿಸ್‍ಮಸ್ ನಿಮಿತ್ತ ಸಾಂತಾ ಕ್ಲಾಸ್ ನಂತೆ ಕೆಂಪು ಟೋಪಿ ಧರಿಸಿ, ಕೈಯಲ್ಲಿ ಉಡುಗೊರೆಗಳ ಜೋಳಿಗೆ ಹಿಡಿದು ವಾಷಿಂಗ್ಟನ್ ಡಿಸಿಯಲ್ಲಿರುವ ನ್ಯಾಷನಲ್ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ದಾಖಲಾಗಿರುವ ಮಕ್ಕಳನ್ನು ಅಪ್ಪಿಕೊಂಡು ಶುಭಾಶಯ ಕೋರಿ ಜೊತೆಗೆ ಉಡುಗೊರೆಗಳನ್ನು ನೀಡಿದ್ದಾರೆ.
ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈಗಾಗಲೇ 2.6 ಮಿಲಿಯನ್ ಜನ ವೀಕ್ಷಿಸಿದ್ದಾರೆ. ಅಲ್ಲದೇ ಒಬಾಮಾರವರ ಈ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್ ಆಸ್ಪತ್ರೆ ಕೂಡ ಒಬಾಮಾ ಅವರಿಗೆ ಕೃತಜ್ಞತೆ ಸಲ್ಲಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.