ಇಸ್ಲಾಮಾಬಾದ್ : ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕ್ ಸರ್ಕಾರದ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಇದೀಗ ಪಾಕಿಸ್ತಾನ್ ಮುಸ್ಲಿಂ ಲೀಗ್ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭ್ರಷ್ಟಾಚಾರದ ವಿಚಾರದಲ್ಲಿ ಮುಸ್ಲಿಂ ಲೀಗ್ ನಾಯಕ ನವಾಜ್ ಷರೀಫ್ ಅವರನ್ನ ಟೀಕಿಸಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹೋಲಿಕೆ ಮಾಡಿದ್ದಾರೆ.
ಸಭೆಯೊಂದರಲ್ಲಿ ಮಾತನಾಡಿದ ಇಮ್ರಾನ್ ಖಾನ್, ಒಂದು ದೇಶದಲ್ಲಿ ಕಾನೂನು ನಿಯಮ ಇಲ್ಲದೇ ಹೋದರೆ ಭ್ರಷ್ಟಾಚಾರ ಹೆಚ್ಚಾಗುತ್ತದೆ, ಅದಕ್ಕೆ ಹೂಡಿಕೆಗಳು ಸಿಗುವುದಿಲ್ಲ.
ತಮ್ಮ ದೇಶದ ಹೊರಗೆ ಕೋಟ್ಯಂತರ ಮೌಲ್ಯದ ಆಸ್ತಿಗಳನ್ನು ಹೊಂದಿರುವ ಒಬ್ಬನೇ ಒಬ್ಬ ನಾಯಕನಿದ್ದರೂ ಹೇಳಿ ನೋಡೋಣ. ನೆರೆಯ ರಾಷ್ಟ್ರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹೊರಗೆ ಎಷ್ಟು ಆಸ್ತಿ ಹೊಂದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.