ಇಸ್ಲಾಮಾಬಾದ್ : ತಮ್ಮ ಮೇಲಿನ ಗುಂಡಿನ ದಾಳಿ ಬಳಿಕ ಸ್ವಲ್ಪ ಚೇತರಿಸಿಕೊಂಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್,
ತಮ್ಮ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ರ್ಯಾಲಿಯನ್ನು ಕೈಬಿಡುವ ಮಹತ್ವದ ಘೋಷಣೆ ಮಾಡಿದ್ದಾರೆ.
ಪಾಕಿಸ್ತಾನದ ಸಂಸತ್ತು ಮತ್ತು ವಿವಿಧ ರಾಜ್ಯಗಳ ವಿಧಾನಸಭೆಗಳಲ್ಲಿರುವ ತಮ್ಮ ಪಕ್ಷದ ಎಲ್ಲ ಸದಸ್ಯರಿಗೂ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.
ಪಾಕಿಸ್ತಾನದ ಮುಖ್ಯ ನಗರ ರಾವಲ್ಪಿಂಡಿಯಲ್ಲಿ ಇಮ್ರಾನ್ ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಆಯೋಜಿಸಿದ್ದ ಪ್ರತಿಭಟನೆಯು ದೊಡ್ಡಪ್ರಮಾಣದಲ್ಲಿ ಜನರು ಸೇರಿದ್ದರು. ಇಸ್ಲಾಮಾಬಾದ್ವರೆಗೆ ನಡೆಸಲು ಉದ್ದೇಶಿಸಿದ್ದ ರ್ಯಾಲಿಯನ್ನು ಅರ್ಧದಲ್ಲೇ ಕೈಬಿಡಲು ಇಮ್ರಾನ್ ಖಾನ್ ನಿರ್ಧರಿಸಿದ್ದಾರೆ.