ಪಾಕಿಸ್ತಾನದ ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಹೇಗೆ ಉತ್ತರಿಸಬೇಕು ಎನ್ನುವುದು ಪ್ರಧಾನಿ ನವಾಜ್ ಷರೀಫ್‌ಗೆ ತಿಳಿಸುತ್ತೇನೆ ಎಂದು ತೆಹರಿಕ್-ಎ-ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಗುಡುಗಿದ್ದಾರೆ.
ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್‌ಗೆ ಈಗಾಗಲೇ ಪತ್ರವನ್ನು ರವಾನಿಸಿದ್ದೇನೆ. ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಗೂ ಕೂಡಾ ಪತ್ರ ರವಾನಿಸುತ್ತೇನೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನದ ಎಲ್ಲಾ ಜನರು ಮಾರ್ಚ್ ನಲ್ಲಿ ಪಾಲ್ಗೊಂಡು ದೇಶದ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸಿರುವ ಅವರು ಭಾರತದ ಆಕ್ರಮಣಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ನಾನು ಪ್ರಧಾನಿ ನವಾಜ್ ಷರೀಫ್ ಅವರಿಗೆ ತೋರಿಸಿಕೊಡುತ್ತೇನೆ ಎಂದಿದ್ದಾರೆ.
ತೆಹರಿಕ್-ಎ-ಇನ್ಸಾಫ್ ಪಕ್ಷ ನಾಳೆ ನಗರದಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿ ಪಾಕಿಸ್ತಾನ ಒಂದು ಸದೃಢ ದೇಶ ಎನ್ನುವುದನ್ನು ತೋರಿಸಿಕೊಡಬೇಕು ಎಂದು ಕರೆ ನೀಡಿದ್ದಾರೆ.
ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ರಾಹೀಲ್ ಶರೀಫ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಪಾಕ್ ಪ್ರಧಾನಿ ನವಾಜ್ ಷರೀಫ್ ಎದುರಾಳಿಗಳನ್ನು ಹಿಮ್ಮೆಟ್ಟಿಸುವಲ್ಲಿ ಅಸಹಾಯಕರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ, ತೆಹರಿಕ್ -ಎ-ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ