ನವದೆಹಲಿ: ಲಡಾಖ್ ಗಡಿಯಲ್ಲಿ ಉಂಟಾಗಿದ್ದ ಬಿಕ್ಕಟ್ಟು ನಿವಾರಣೆಗೆ ಸೇನಾ ಅಧಿಕಾರಿಗಳ ಮಟ್ಟದಲ್ಲಿ ನಡೆದ ಮಾತುಕತೆ ಫಲಪ್ರದವಾಗಿದೆ ಎಂದು ಚೀನಾ ವಿದೇಶಾಂಗ ಇಲಾಖೆ ಹೇಳಿಕೊಂಡಿದೆ.
ಬುಧವಾರ ಹೇಳಿಕೆ ಬಿಡುಗಡೆ ಮಾಡಿದ ಚೀನಾ ವಿದೇಶಾಂಗ ಇಲಾಖೆ ಭಾರತ ಮತ್ತು ಚೀನಾ ಪರಸ್ಪರ ಒಪ್ಪಂದದ ಮೇರೆಗೆ ಸೇನೆ ಹಿಂತೆಗೆಯುವ ಪ್ರಕ್ರಿಯೆಯಲ್ಲಿ ತೊಡಗಿದೆ ಎಂದಿದೆ.
ಮೇ 5 ರಿಂದ ಚೀನಾ ಈ ವಿವಾದಿತ ಪ್ರದೇಶದಲ್ಲಿ ಸೇನೆ ಜಮಾವಣೆ ಮಾಡಲು ಪ್ರಾರಂಭಿಸಿತ್ತು. ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪುತ್ತಿದ್ದಂತೆ ಪ್ರಧಾನಿ ಮೋದಿ ನೇತೃತ್ವದಲ್ಲಿ ರಕ್ಷಣಾ ಇಲಾಖೆಯ ಪ್ರಮುಖರು ಸಭೆ ನಡೆಸಿ ತಂತ್ರ ರೂಪಿಸಿದ್ದರು. ಇದರ ಬೆನ್ನಲ್ಲೇ ಚೀನಾ ಮಾತುಕತೆಗೆ ಸಿದ್ಧ ಎಂದು ಘೋಷಿಸಿತ್ತು. ಅದಾದ ಬಳಿಕ ಸೇನಾ ಅಧಿಕಾರಿಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿತ್ತು.