ಢಾಕಾ: ಭಾರತವೇನಾದರೂ ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ರೆ ಆ ದೇಶದ ಏಳು ರಾಜ್ಯಗಳನ್ನು ನಾವು ವಶಪಡಿಸಿಕೊಳ್ಳಲಿದ್ದೇವೆ ಎಂದು ಬಾಂಗ್ಲಾದೇಶದ ಮಾಜಿ ಸೇನಾ ನಾಯಕ ಫಝ್ಲೂರ್ ರೆಹಮಾನ್ ಹೇಳಿಕೊಂಡಿದ್ದಾರೆ.
ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಭಾರತ ನೆರೆಯ ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಲು ಹೊಂಚು ಹಾಕಿ ಕಾಯುತ್ತಿದೆ. ಒಂದು ವೇಳೆ ಭಾರತವೇನಾದರೂ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಾಕ್ ಬೆಂಬಲಕ್ಕೆ ನಾವಿದ್ದೇವೆ ಎಂದು ಈ ಮೂಲಕ ರೆಹಮಾನ್ ಹೇಳಿದ್ದಾರೆ.
ಬಾಂಗ್ಲಾದೇಶದ ಮುಖ್ಯಸಲಹೆಗಾರ ಮುಹಮ್ಮದ್ ಯೂನಸ್ ಆಪ್ತರಾಗಿರುವ ರೆಹಮಾನ್, ಈ ವಿಚಾರದಲ್ಲಿ ತಮಗೆ ಚೀನಾ ಸಹಾಯ ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಈಶಾನ್ಯ ಭಾರತದ ಏಳು ರಾಜ್ಯಗಳನ್ನು ವಶಪಡಿಸಿಕೊಳ್ಳಲಿದ್ದೇವೆ. ಇದಕ್ಕಾಗಿ ನಾವು ಚೀನಾ ಸಹಾಯದೊಂದಿಗೆ ಮಿಲಿಟರಿ ಕಾರ್ಯಾಚರಣೆ ಮಾಡಬೇಕಾಗುತ್ತದೆ ಎಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.