Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬ್ರಿಟನ್ ಸಂಸತ್ತಿಗೆ ಭಾರತೀಯ ಮೂಲದ ಶಿವಾನಿ ರಾಜಾ: ಭಗವದ್ಗೀತೆ ಹೆಸರಲ್ಲಿ ಪ್ರಮಾಣ ಸ್ವೀಕಾರ

Shivani Raja

Sampriya

ಲಂಡನ್‌ , ಗುರುವಾರ, 11 ಜುಲೈ 2024 (17:17 IST)
Photo Courtesy X
ಲಂಡನ್: ಭಾರತೀಯ ಮೂಲದ ಶಿವಾನಿ ರಾಜಾ ಅವರು ಬ್ರಿಟನ್ ಸಂಸತ್ತಿಗೆ ಆಯ್ಕೆಯಾಗಿದ್ದು, ಅವರು ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

ಲೀಸೆಸ್ಟರ್ ಈಸ್ಟ್ ಕ್ಷೇತ್ರದಿಂದ ಶಿವಾನಿ ಅವರು ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಕಳೆದ 37 ವರ್ಷಗಳಲ್ಲಿ ಲೀಸೆಸ್ಟರ್ ಈಸ್ಟ್ ಕ್ಷೇತ್ರದಿಂದ ಆಯ್ಕೆಯಾದ ಕನ್ಸರ್ವೇಟಿವ್ ಪಕ್ಷದ ಮೊದಲ ಸಂಸದೆ ಎನಿಸಿದ್ದಾರೆ. ಬ್ರಿಟನ್ ಸಂಸತ್ತಿನಲ್ಲಿ ಜುಲೈ 10ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

'ಲೀಸೆಸ್ಟರ್ ಈಸ್ಟ್ ಕ್ಷೇತ್ರವನ್ನು ಪ್ರತಿನಿಧಿಸಿ ಸಂಸತ್ತಿಗೆ ಆಯ್ಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ' ಎಂದು ಗುಜರಾತ್ ಮೂಲದ ಉದ್ಯಮಿ ಶಿವಾನಿ ತಿಳಿಸಿದ್ದಾರೆ.

ಬ್ರಿಟನ್ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಭಾರತ ಮೂಲದ ಮಾಜಿ ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ತೀವ್ರ ಮುಖಭಂಗ ಅನುಭವಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಐಟಿ ತನಿಖೆ ನಡೆಯುತ್ತಿರುವಾಗ ಇಡಿ ದಾಳಿ ಅನಾವಶ್ಯಕವಾಗಿತ್ತು: ಡಿ.ಕೆ. ಶಿವಕುಮಾರ್