ದೇರ್ ಅಲ್-ಬಾಲಾ: ಇಂದು ಮುಂಜಾನೆ ಮಧ್ಯ ಗಾಜಾ ಪ್ರದೇಶದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 21ಜನ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಮುಂಜಾನೆ ಇಸ್ರೇಲ್ ಲೆಬನಾನ್ ಮೇಲೆ ದಾಳಿ ಮಾಡಿದ ನಂತರ ಹಿಜ್ಬುಲ್ಲಾ ಮತ್ತು ಹಮಾಸ್ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು.
ದೇರ್ ಅಲ್-ಬಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ ಜನರು ಮಸೀದಿಯಲ್ಲಿ ಆಶ್ರಯ ಪಡೆಯುತ್ತಿದ್ದರು. ಅಮಸೀದಿ ಮೇಲೆ ದಾಳಿ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ಹಲವು ಮಂದಿ ಗಾಯಗೊಂಡಿದ್ದಾರೆಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ತಿಳಿಸಿದ್ದಾರೆ.
ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಇತ್ತೀಚಿನ ದಾಳಿಗಳು ಗಾಜಾದಲ್ಲಿ ಹೆಚ್ಚುತ್ತಿರುವ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ 42 ಸಾವಿರಕ್ಕೆ ಸಮೀಪದಲ್ಲಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ.