ಶಿಮ್ಲಾ: ಹಿಮಾಚಲಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜೈರಾಮ್ ಠಾಕೂರ್ ಅವರು ಹಿಮಾಚಲಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಕಾರ್ಯಕ್ರಮ ರಾಜಭವನದ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿಯ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಹಾಗು ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಅಲ್ಲಿ ಬಿಗಿ ಪೊಲೀಸ್ ಭದ್ರತೆ ಕೂಡ ಏರ್ಪಡಿಸಲಾಗಿದೆ.
ಜೈರಾಮ್ ಠಾಕೂರ್ ಅವರು ಬಡ ರೈತ ಕುಟುಂಬದಲ್ಲಿ ಜನಿಸಿದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿ, ಸ್ನಾತಕೋತ್ತರ ಪದವಿದಾರ ಕೂಡ ಹೌದು. ಇವರು ಆರ್.ಎಸ್.ಎಸ್, ಬಿಜೆಪಿಯಲ್ಲಿ ಗುರುತಿಸಿಕೊಂಡು ಗಮನಾರ್ಹ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ