ನವದೆಹಲಿ: ಭಾರತದಲ್ಲಿ ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಒತ್ತಾಯ ಕೇಳಿಬಂದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಕೂಡಾ ಚೀನಾ ಮೂಲದ ಕಂಪನಿಯೊಂದಿಗಿನ ಯೋಜನೆಗೆ ತಡೆ ನೀಡಿದೆ.
ವಿದೇಶೀ ನೇರ ಬಂಡವಾಳ ಹೂಡಿಕೆ ಯೋಜನೆಯಡಿಯಲ್ಲಿ ಮಹಾರಾಷ್ಟ್ರ ಸರ್ಕಾರ ಚೀನಾ ಕಂಪನಿಗಳೊಂದಿಗೆ ಮಾಡಿಕೊಂಡಿದ್ದ ಸುಮಾರು 5 ಸಾವಿರ ಕೋಟಿ ರೂ.ಗೆ ಒಪ್ಪಂದಕ್ಕೆ ತಾತ್ಕಾಲಿಕ ತಡೆ ನೀಡಿದೆ. ಗಲ್ವಾನ್ ಘರ್ಷಣೆಗೆ ಕೆಲವೇ ಗಂಟೆಗಳ ಮೊದಲು ಈ ಒಪ್ಪಂದ ಮಾಡಿಕೊಳ್ಳಲಾಗಿತ್ತು.