ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ಪ್ರಕಟ ?

Webdunia
ಮಂಗಳವಾರ, 26 ಏಪ್ರಿಲ್ 2022 (13:01 IST)
ಜಾರ್ಖಂಡ್ : ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದೆ. ಒಂದೊಂದೆ ರಾಜ್ಯಗಳಲ್ಲಿ ಕಠಿಣ ನಿರ್ಬಂಧಗಳು ಜಾರಿಯಾಗುತ್ತಿದೆ.

ಜಾರ್ಖಂಡ್ನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ. ಇದರ ಬೆನ್ನಲ್ಲೇ ನಿರ್ಬಂಧ ಜಾರಿಗೊಳಿಸಿದೆ. ಮಾಸ್ಕ್ , ಸಾಮಾಜಿಕ ಅಂತರ ಸೇರಿದಂತೆ ಹಲವು ಸೂಚನೆ ನೀಡಿರುವ ಜಾರ್ಖಂಡ್ ಇದೀಗ ಶಾಲೆಗಳಲ್ಲಿ ಸಭೆ, ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿಷೇಧಿಸಿದೆ.

ಜಾರ್ಖಂಡ್ ಶಿಕ್ಷಣ ಸಚಿವಾಲಯ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯ ಮಾಡಲಾಗಿದೆ. ಸ್ಥಳೀಯ ಆರೋಗ್ಯ ಕೇಂದ್ರಗಳ ಸಹಾಯದೊಂದಿಗೆ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು. ಇನ್ನು ಜಿಲ್ಲಾಡಳಿತ ಶಾಲೆಗಳಲ್ಲಿ ಯಾದೃಚ್ಛಿಕ COVID-19 ಪರೀಕ್ಷೆ ಮಾಡಬೇಕು ಎಂದು ಮಾರ್ಗಸೂಚಿ ಪ್ರಕಟಿಸಿದೆ.

ಶಾಲೆಗಳಲ್ಲಿ ಬೆಳಗಿನ ಸಭೆ, ಇತರ ಸಭಾ ಕಾರ್ಯಕ್ರಮಗಳು, ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಗಳನ್ನು ಆಯೋಜಿಸದಂತೆ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ. ಶಾಲೆಗಳಲ್ಲಿ ತೀವ್ರ ಮುನ್ನಚ್ಚರಿಕೆ ತೆಗೆದುಕೊಳ್ಳಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ.

ಶಾಲೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಲಾ ಅವರಣ, ಗ್ರಂಥಾಲಯ, ಶಾಲಾ ಕೊಠಡಿಗಳಲ್ಲಿ ಸ್ಯಾನಿಟೈಸೇಶನ್ ಮಾಡುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಮುಂದಿನ ಸುದ್ದಿ
Show comments