ಕನ್ನಡ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಮೂಲದ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರು ಲೇಔಟ್ ಬಳಿ ನಡೆದಿದೆ.
ನಿಂತಿದ್ದ ಕಾರಿಗೆ ನೈಜಿರಿಯಾ ಮೂಲದ ವ್ಯಕ್ತಿಗಳು ಚಲಾಯಿಸುತ್ತಿದ್ದ ಕಾರು ಡಿಕ್ಕಿಹೊಡೆದಿದ್ದಾರೆ ಈ ಕುರಿತು ನೈಜಿರಿಯಾ ಮೂಲದ ಚಾಲಕನನ್ನು ಪ್ರಶ್ನಿಸಿದ್ದಕ್ಕೆ ಗೂಂಡಾ ವರ್ತನೆ ತೋರಿದ್ದಾನೆ ಎನ್ನಲಾಗಿದೆ. ಅಲ್ಲದೇ ಕನ್ನಡಪರ ಸಂಘಟನೆ ಕಾರ್ಯಕರ್ತ ಸ್ಥಳಕ್ಕೆ ದಾವಿಸಿ ಘಟನೆ ಕುರಿತು ಪ್ರಶ್ನಿಸಿದಾಗ ಆತನ ಮೇಲೆ ಮೂರು ಜನ ನೈಜಿರಿಯಾ ಪ್ರಜೆಗಳು ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.