ಕಾಬೂಲ್ : ಮಹಿಳಾ ಶಿಕ್ಷಣಕ್ಕೆ ನಿಷೇಧ ಹೇರಿರುವ ತಾಲಿಬಾನ್ ಸರ್ಕಾರ ಇದೀಗ ಅಘ್ಘಾನಿಸ್ತಾನದಲ್ಲಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿನಿಯರು ಹಾಜರಾಗದಂತೆ ಸೂಚಿಸಿದೆ.
ಫೆಬ್ರವರಿ ತಿಂಗಳಲ್ಲಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಈ ನಡುವೆ ಇದೀಗ ವಿದ್ಯಾರ್ಥಿನಿಯರು ಯುನಿವರ್ಸಿಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ತಾಲಿಬಾನ್ ಸರ್ಕಾರ ಆದೇಶ ಹೊರಡಿಸಿದೆ.
ತಾಲಿಬಾನ್ ಶಿಕ್ಷಣ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ಸರ್ಕಾರ ಆದೇಶ ಹೊರಡಿಸುವವರೆಗೆ ಮಹಿಳಾ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆಯುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ತಿಳಿಸಿದೆ.