ಬಿಜೆಪಿ ಪಕ್ಷದ ನಿರಂತರ ಹೋರಾಟದಿಂದ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಲು ಮುಂದಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸಾಲ ಮನ್ನಾ ಕ್ರೆಡಿಟ್ ಪಡೆಯಲು ಮುಂದಾದ ಶೆಟ್ಟರ್, ಯಡಿಯೂರಪ್ಪ ನೇತೃತ್ವದಲ್ಲಿ ಲಕ್ಷಾಂತರ ರೈತರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರಿಂದ ಬೆದರಿದ ಸರಕಾರ ರೈತರ ಸಾಲ ಮನ್ನಾ ಮಾಡಿದೆ ಎಂದರು.
ರಾಜ್ಯ ಸರಕಾರ 50 ಸಾವಿರ ರೂಪಾಯಿಗಳವರೆಗಿನ ಸಾಲ ಮನ್ನಾ ಮಾಡಲಾಗಿದೆ. ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕಿತ್ತು. ರೈತರ ಸಾಲ ಮನ್ನಾದ 8165 ಕೋಟಿ ರೂಪಾಯಿಗಳನ್ನು ಕೂಡಲೇ ಬ್ಯಾಂಕ್ಗೆ ಸರಕಾರ ಪಾವತಿಸಬೇಕು. ಇಲ್ಲವಾದಲ್ಲಿ ಮುಂಬರುವ ಸರಕಾರಕ್ಕೆ ಹೊರೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರದಿಂದಲೂ ರೈತರ ಸಾಲ ಮನ್ನಾ ಮಾಡಿಸಲು ಪ್ರಯತ್ನಿಸುತ್ತೇವೆ. ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ರೈತರ ಸಾಲದ ಬಗ್ಗೆ ಪ್ರಸ್ತಾಪಿಸಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದರು.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.