ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಪಾಕ್ನಲ್ಲಿ ರೂಪಾಯಿಯ ಮೌಲ್ಯ ದಾಖಲೆ ಪ್ರಮಾಣದ ಕುಸಿತ ಕಂಡಿದೆ.
ಅಂತಾರಾಷ್ಟ್ರೀಯ ಹಣಕಾಸು ನಿಧಿ ಜೊತೆ ಪಾಕಿಸ್ತಾನ ಪ್ಯಾಕೇಜ್ ಮಾತುಕತೆ ನಡೆಸುತ್ತಿದೆ. ಇದರ ನಡುವೆ ರೂಪಾಯಿ ಶೇ.7 ರಷ್ಟು ಕುಸಿತವಾಗಿದೆ.
ಆರ್ಥಿಕ ಬಿಕ್ಕಟ್ಟು, ವಿದೇಶಿ ಸಾಲ, ವಿದೇಶಿ ವಿನಿಮಯ ಕೊರತೆ, ರೂಪಾಯಿ ಕುಸಿತ ಸೇರಿದಂತೆ ಹಲವು ಸಮಸ್ಯೆಗಳು ಪಾಕಿಸ್ತಾನ ಎದುರಿಸುತ್ತಿದೆ. ಇದರ ನಡುವೆ ಮುಂದಿನ ಹಣಕಾಸು ವರ್ಷದಲ್ಲಿ ಅಮೆರಿದಿಂದ ಪಡೆದಿರುವ 21 ಶತಕೋಟಿ ವಿದೇಶಿ ಸಾಲ ಮರುಪಾವತಿಸಬೇಕಿದೆ.
ವಿದೇಶಿ ವಿನಿಮಯ ಕೊರತೆ ಎದುರಿಸುತ್ತಿರುವ ಪಾಕಿಸ್ತಾನ ತಲೆ ಮೇಲೆ ಕೈಹೊತ್ತು ಕೂತಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿ ಜೊತೆ ಸಾಲಕ್ಕೆ ಮಾತುಕತೆ ನಡೆಸುತ್ತಿದೆ ಎಂದು ಪಾಕಿಸ್ತಾನದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.