ಪನಾಮಾ ಪೇಪರ್ ಪ್ರಕರಣದಲ್ಲಿ ಭ್ರಷ್ಟಾಚಾರವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ನವಾಜ್ ಷರೀಪ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪಾಕಿಸ್ತಾನದ ಸುಪ್ರೀಂಕೋರ್ಟ್ ಪ್ರಧಾನಿ ಹುದ್ದೆಯಿಂದ ನವಾಜ್ ಷರೀಫ್ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಷರೀಪ್ ಪ್ರಧಾನಿ ಹುದ್ದೆಯನ್ನು ತೆರವುಗೊಳಿಸಬೇಕಾದ ಅನಿವಾರ್ಯತೆ ಎದುರಾಗಿತ್ತು.
ನವಾಜ್ ಷರೀಫ್ ವಿರುದ್ಧದ ಭ್ರಷ್ಟಾಚಾರದ ಆರೋಪ ಸಾಬೀಕಾಗಿದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸುಪ್ರೀಂಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ.
ನವಾಜ್ ಷರೀಫ್ ಕುಟುಂಬ ಪನಾಮಾ ಪೇಪರ್ ಹಗರಣದಲ್ಲಿ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರವೆಸಗಿ ಅಕ್ರಮ ಹಣ ಸಂಪಾದಿಸಿರುವುದು ಬಹಿರಂಗವಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.
ನವಾಜ್ ಷರೀಫ್ ಸಹೋದರ ಪ್ರಧಾನಿ ಹುದ್ದೆಯನ್ನು ಅಲಂಕರಿಸುವ ಸಾಧ್ಯತೆಗಳಿವೆ ಎಂದು ಪಾಕಿಸ್ತಾನ ಮುಸ್ಲಿಂ ಲೀಗ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.