ಭಾರತೀಯ ಮೂಲದ 8 ವರ್ಷ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ ಪಾಕಿಸ್ತಾನ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
21 ವರ್ಷ ವಯಸ್ಸಿನ ಪಾಕಿಸ್ತಾನ ಮೂಲದ ಆರೋಪಿ 8 ವರ್ಷದ ಬಾಲಕಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದ್ದರಿಂದ ಆತನನ್ನು ಗಡಿಪಾರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಕಟ್ಟಡ ನಿರ್ಮಾಣ ವಿಭಾಗದಲ್ಲಿ ಸೂಪರ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ, ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.
ಘಟನೆ ನವೆಂಬರ 29 ರಂದು ನಡೆದಿದ್ದು, ಆರೋಪಿ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ನಂತರ ದುಬೈನಿಂದ ಪಾಕಿಸ್ತಾನಕ್ಕೆ ಗಡಿಪಾರು ಮಾಡುವಂತೆ ಆದೇಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.