ನವದೆಹಲಿ: ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಮೋದಿ ಮತ್ತು ಅವರ ಸರ್ಕಾರ ಜಾಗತಿಕ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ನಲ್ಲಿ ನಡೆದ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಅಸಹಿಷ್ಣುತೆ ಮತ್ತು ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ ದಿನೇ ದಿನೇ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಶಾಂತಿಯುತ ರಾಷ್ಟ್ರದಲ್ಲಿ ಇಷ್ಟೊಂದು ಅಸಹಿಷ್ಣುತೆ ಹೇಗೆ ಸೃಷ್ಟಿಯಾಯಿತು ಎಂದು ಜಗತ್ತೇ ನಮ್ಮನ್ನು ಪ್ರಶ್ನಿಸುತ್ತಿದೆ ಎಂದಿದ್ದಾರೆ.
ಸಾವಿರಾರು ವರ್ಷಗಳಿಂದ ಭಾರತದಲ್ಲಿ ಶಾಂತಿ ಸೌಹಾರ್ದತೆ ನೆಲೆಸಿತ್ತು. ಆದರೆ ಮೋದಿ ಸರ್ಕಾರ ಅದೆಲ್ಲವನ್ನೂ ಮಣ್ಣುಪಾಲು ಮಾಡಿದೆ. ಕೆಲವು ವಿಧ್ವಂಸಕ ರಾಜಕೀಯ ಶಕ್ತಿಗಳು ಭಾರತವನ್ನು ಹಾಳು ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ