Webdunia - Bharat's app for daily news and videos

Install App

ಪ್ರಧಾನಿ ಮೋದಿ ಸರ್ಕಾರ ಭಾರತದ ಮಾನ ಹರಾಜು ಹಾಕುತ್ತಿದೆ: ರಾಹುಲ್ ಗಾಂಧಿ

Webdunia
ಗುರುವಾರ, 21 ಸೆಪ್ಟಂಬರ್ 2017 (10:46 IST)
ನವದೆಹಲಿ: ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಹರಿ ಹಾಯ್ದಿದ್ದಾರೆ. ಮೋದಿ ಮತ್ತು ಅವರ ಸರ್ಕಾರ ಜಾಗತಿಕ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

 
ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ನಲ್ಲಿ ನಡೆದ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಅಸಹಿಷ್ಣುತೆ ಮತ್ತು ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ ದಿನೇ ದಿನೇ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಶಾಂತಿಯುತ ರಾಷ್ಟ್ರದಲ್ಲಿ ಇಷ್ಟೊಂದು ಅಸಹಿಷ್ಣುತೆ ಹೇಗೆ ಸೃಷ್ಟಿಯಾಯಿತು ಎಂದು ಜಗತ್ತೇ ನಮ್ಮನ್ನು ಪ್ರಶ್ನಿಸುತ್ತಿದೆ ಎಂದಿದ್ದಾರೆ.

ಸಾವಿರಾರು ವರ್ಷಗಳಿಂದ ಭಾರತದಲ್ಲಿ ಶಾಂತಿ ಸೌಹಾರ್ದತೆ ನೆಲೆಸಿತ್ತು. ಆದರೆ ಮೋದಿ ಸರ್ಕಾರ  ಅದೆಲ್ಲವನ್ನೂ ಮಣ್ಣುಪಾಲು ಮಾಡಿದೆ. ಕೆಲವು ವಿಧ್ವಂಸಕ ರಾಜಕೀಯ ಶಕ್ತಿಗಳು ಭಾರತವನ್ನು ಹಾಳು ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ…  ಪ್ರಧಾನಿ ಮೋದಿ ಹೊಗಳಿದ ವಿರಾಟ್ ಕೊಹ್ಲಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments