ಲಾರಿಯಲ್ಲಿ ಮೃತದೇಹವಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಲಾರಿಯನ್ನು ಪರಿಶೀಲನೆ ನಡೆಸಿದಾಗ 39 ಮೃತದೇಹಗಳು ಪತ್ತೆಯಾಗಿವೆ. ಆದರೆ ಮೃತದೇಹಗಳ ಗುರುತು ಇನ್ನು ಪತ್ತೆಯಾಗಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಉತ್ತರ ಐರ್ಲೆಂಡ್ ನ 25 ವರ್ಷದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಈಗಾಗಲೇ ತನಿಖೆ ಪ್ರಾರಂಭಿಸಿದ ಪೊಲೀಸರು ಈ ಲಾರಿ ಬಲ್ಗೇರಿಯಾದಿಂದ ಬಂದಿದ್ದು, ಮಾನವ ಕಳ್ಳಸಾಗಾಣಿಕೆ ಮಾಡುತ್ತಿರುವುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.