Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!

ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!
ಮಾಸ್ಕೋ , ಬುಧವಾರ, 4 ಮೇ 2022 (11:02 IST)
ಮಾಸ್ಕೋ : ಉಕ್ರೇನ್ ಮೇಲೆ ಸತತ ಎರಡು ತಿಂಗಳಿಂದ ಯುದ್ಧ ನಡೆಸುತ್ತಿದ್ದರೂ,

ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಪುಟಿನ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪುಟಿನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು. ದೇಶದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರಿಗೆ ತಾತ್ಕಾಲಿಕವಾಗಿ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಯುಎಸ್ನ ನ್ಯೂಯಾರ್ಕ್ ಪೋಸ್ಟ್ ವರದಿಯಲ್ಲಿ ತಿಳಿಸಿದೆ. 

ಪುಟಿನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕೆಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ರಷ್ಯಾದ ಮಾಜಿ ವಿದೇಶಿ ಗುಪ್ತಚರ ಸೇವೆಯ ಲೆಫ್ಟಿನೆಂಟ್ ಜನರಲ್ ನಡೆಸುತ್ತಿದ್ದ ಟೆಲಿಗ್ರಾಮ್ ಚಾನೆಲ್ ಅನ್ನು ಉಲ್ಲೇಖಿಸಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ರಷ್ಯಾದ ಅಧ್ಯಕ್ಷರು ಕ್ಯಾನ್ಸರ್ ಮತ್ತು ಪಾರ್ಕಿನ್ಸನ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂಬ ವದಂತಿಗಳಿವೆ. ನಿರೀಕ್ಷಿತ ಶಸ್ತ್ರಚಿಕಿತ್ಸೆ ಮತ್ತು ಚೇತರಿಕೆಯು ಪುಟಿನ್ ಅವರನ್ನು ಕೆಲ ಕಾಲ ಅಸಮರ್ಥಗೊಳಿಸುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ. 

ಆದರೆ, ಈ ವರದಿಯನ್ನು ದೃಢೀಕರಿಸುವ ಯಾವುದನ್ನೂ ನಾವು ನೋಡಿಲ್ಲ ಎಂದು ಪೆಂಟಗನ್ ವಕ್ತಾರ ಜಾನ್ ಕಿರ್ಬಿ ಹೇಳಿರುವುದಾಗಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಕೆಲವು ದಿನಗಳ ಹಿಂದೆ ಪುಟಿನ್, ನಿಕೊಲಾಯ್ ಪಟ್ರುಶೆವ್ ಅವರೊಂದಿಗೆ ಎರಡು ಗಂಟೆಗಳ ಕಾಲ ತುಂಬಾ ಆತ್ಮೀಯವಾದ ಸಂಭಾಷಣೆ ನಡೆಸಿದ್ದರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿಯು ಟೆಲಿಗ್ರಾಮ್ ಪೋಸ್ಟ್ ಅನ್ನು ಉಲ್ಲೇಖಿಸಿ ಹೇಳಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಅಂಗ ದಾನಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ ಅಪ್ರಾಪ್ತ ಬಾಲಕಿ!