ವಾರ್ಸಾ : ಪೋಲೆಂಡ್ಗೆ ಭೇಟಿ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಉಕ್ರೇನ್ ನಿರಾಶ್ರಿತರನ್ನು ಭೇಟಿ ಮಾಡಿದರು.
ಈ ವೇಳೆ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಕಟುಕ ಎಂದು ಕರೆದಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸಿದ ನಂತರ ಲಕ್ಷಾಂತರ ಜನರು ಉಕ್ರೇನ್ ತೊರೆದು ನೆರೆಯ ದೇಶಗಳಿಗೆ ವಲಸೆ ಹೋಗಿದ್ದಾರೆ.
ನಿರಾಶ್ರಿತರನ್ನು ಭೇಟಿಯಾದ ಸಂದರ್ಭದಲ್ಲಿ ಪುಟಿನ್ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ್ದಕ್ಕೆ ಅವನೊಬ್ಬ ಕಟುಕ ಎಂದು ಹೇಳಿದ್ದಾರೆ.
ಉಕ್ರೇನ್ ಆಕ್ರಮಣದಲ್ಲಿ ರಷ್ಯಾ ತನ್ನ ಕಾರ್ಯತಂತ್ರವನ್ನು ಬದಲಾಯಿಸಿದೆ ಎಂಬುದು ಖಚಿತವಾಗಿಲ್ಲ. ಆದರೆ ಪ್ರಸ್ತುತ ರಷ್ಯಾದ ಗಮನ ಸಂಪೂರ್ಣವಾಗಿ ಡೋನ್ಬಾಸ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ ಎಂದು ಅವರು ಹೇಳಿದ್ದಾರೆ.