ನ್ಯೂಯಾರ್ಕ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೆರಿಕಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುತ್ತಾ ತಮ್ಮ ನೇತೃತ್ವದ ಹಿಂದಿನ ಸರ್ಕಾರದ ವೈಫಲ್ಯವನ್ನು ತಾವೇ ಒಪ್ಪಿಕೊಂಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಹಿಂದಿನ ಸರ್ಕಾರಗಳು ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾದವು ಎಂದು ಸ್ವತಃ ರಾಹುಲ್ ಒಪ್ಪಿಕೊಂಡಿದ್ದಾರೆ. ಪ್ರಿನ್ಸ್ ಟನ್ ವಿವಿಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್, ತಮ್ಮ ಸರ್ಕಾರ ಉದ್ಯೋಗ ಸೃಷ್ಟಿಸಲು ವಿಫಲವಾಯಿತು ಎಂದ ರಾಹುಲ್ ತಕ್ಷಣ ಮೋದಿ ಸರ್ಕಾರವೂ ಭಾರತದ ಯುವಕರಿಗೆ ಉದ್ಯೋಗ ದೊರಕಿಸಿಕೊಡಲು ವಿಫಲವಾಗಿದೆ ಎಂದಿದ್ದಾರೆ.
ಅಲ್ಲದೆ, ಮೋದಿ ಸರ್ಕಾರ ಮೇಕ್ ಇನ್ ಇಂಡಿಯಾ ಮೂಲಕ ಶ್ರೀಮಂತ ವರ್ಗದವರಿಗೆ ಮಾತ್ರ ನೆರವಾಗುತ್ತಿದೆ ಎಂದಿದ್ದಾರೆ. ಜಿಎಸ್ ಟಿ ಮತ್ತು ಮೇಕ್ ಇನ್ ಇಂಡಿಯಾ ಯೋಜನೆಗಳು ಒಳ್ಳೆಯದೇ. ಆದರೆ ಇದು ಸಣ್ಣ ಉದ್ಯಮಿಗಳಿಗೆ ನೆರವಾಗುವ ಹಾಗಿರಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಸಂವಾದದಲ್ಲಿ ರಾಹುಲ್ ಹೆಚ್ಚಾಗಿ ಆರ್ಥಿಕತೆ ಬಗ್ಗೆ ಮಾತನಾಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ