ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಯವರಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಹೆದರುತ್ತಾರೆ.
ಹೀಗಂತ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ನ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಗೆ ಮನವಿ ಮಾಡಿರುವ ಬೋರಾ, ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ನ ಅಧ್ಯಕ್ಷರನ್ನಾಗಿ ಮಾಡಬೇಕು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ರಾಹುಲ್ ಗಾಂಧಿಯವರನ್ನು ಕಂಡರೆ ಹೆದರುತ್ತಾರೆ ಎಂದೂ ರಿಪುನ್ ಬೋರಾ ಹೇಳಿದ್ದಾರೆ.
ಪೂರ್ಣಾವಧಿಗೆ ಪ್ರಭಾವಿ ಮುಖಂಡನನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸುವಂತೆ ಪಕ್ಷದ ಮುಖಂಡರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.