Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರಿಗೆ ದೂರದೃಷ್ಟಿಯಿದೆ: ಸ್ಯಾಮ್ ಪಿತ್ರೋಡಾ

Sam Pitroda

Krishnaveni K

ನವದೆಹಲಿ , ಸೋಮವಾರ, 9 ಸೆಪ್ಟಂಬರ್ 2024 (12:56 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ದೂರದೃಷ್ಟಿಯುಳ್ಳ ನಾಯಕ ಎಂದು ಕಾಂಗ್ರೆಸ್ ಸಾಗರೋತ್ತರ ನಾಯಕ ಸ್ಯಾಮ್ ಪಿತ್ರೋಡಾ ಎಂದಿದ್ದಾರೆ.

ಟೆಕ್ಸಾಸ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿರುವ ಸ್ಯಾಮ್ ಪಿತ್ರೋಡಾ, ‘ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರಿಗೆ ಯಾವುದೇ ವಿಷಯದ ಬಗ್ಗೆ ಆಳವಾದ ಜ್ಞಾನವಿದೆ. ಅವರು ಹೆಚ್ಚು ವಿದ್ಯಾವಂತರು, ಚೆನ್ನಾಗಿ ಓದುತ್ತಾರೆ. ಅವರನ್ನು ಅರ್ಥ ಮಾಡಿಕೊಳ್ಳುವುದು ಸುಲಭವಲ್ಲ’ ಎಂದಿದ್ದಾರೆ ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ಟೆಕ್ಸಾಸ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದಲ್ಲಿ ಸ್ಯಾಮ್ ಪಿತ್ರೋಡಾ, ಕಾಂಗ್ರೆಸ್ ಯುವರಾಜನನ್ನು ಹಾಡಿ ಹೊಗಳಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ. ಆದರೆ ರಾಹುಲ್ ಯಾವುದೇ ವಿಚಾರದ ಬಗ್ಗೆ ಆಳವಾಗಿ ತಿಳಿದುಕೊಂಡಿದ್ದಾರೆ ಎಂದಿದ್ದಾರೆ.

ರಾಹುಲ್ ಗಾಂಧಿ ಇದೀಗ ಅಮೆರಿಕಾ ಪ್ರವಾಸದಲ್ಲಿರುವಾಗಲೇ ಸ್ಯಾಮ್ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿದ್ದಾರೆ. ರಾಹುಲ್ ನಿನ್ನೆ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದು ಇಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕನಾಗ ಬಳಿಕ ಇದೇ ಮೊದಲ ಬಾರಿಗೆ ಅವರು ಅಮೆರಿಕಾಗೆ ಪ್ರಯಾಣ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರಕ್ಕೆ ಕೌಂಟ್ ಡೌನ್ ಶುರು