ಸೌದಿ ಅರೇಬಿಯಾ : ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸೌದಿ ಅರೇಬಿಯಾ ಸರ್ಕಾರ ತನ್ನ ಕಟ್ಟುನಿಟ್ಟಿನ ನಿಯಮವೊಂದನ್ನು ಸಡಿಲಿಸಿದೆ.
ಈ ಹಿಂದೆ ಜಾರಿಯಲ್ಲಿದ್ದ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಸಡಿಲಿಸುತ್ತಾ ಬಂದಿದ್ದ ಸೌದಿ ಅರೇಬಿಯಾ ಈಗ ವಿದೇಶಿ ಪುರುಷ ಮತ್ತು ಮಹಿಳೆಯರು ಸಂಬಂಧಿಕರಲ್ಲದಿದ್ದರೂ ಹೋಟೆಲ್ ನ ಒಂದೇ ಕೊಠಡಿಯಲ್ಲಿ ತಂಗಲು ಅವಕಾಶ ಕಲ್ಪಿಸಿದೆ.
ಈ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಸರ್ಕಾರ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಹೆಚ್ಚಾಗಬಹುದೆಂಬ ನಿರೀಕ್ಷೆಯನ್ನು ಹೊಂದಿದೆ ಎನ್ನಲಾಗಿದೆ.