ವಾಷಿಂಗ್ಟನ್ : ರಷ್ಯಾದಿಂದ ಆಮದಾಗುತ್ತಿದ್ದ ತೈಲಕ್ಕೆ ಅಮೆರಿಕ ನಿರ್ಬಂಧ ವಿಧಿಸಿದೆ.
ಇದರ ನಡುವೆಯೇ ತೈಲ ಶ್ರೀಮಂತ ರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಸಂಯುಕ್ತ ಅರಬ್ ಒಕ್ಕೂಟ (ಯುಎಇ) ಸಂಪರ್ಕಿಸಲು ಅಮೆರಿಕ ಮುಂದಾಗಿದೆ. ಆದರೆ ಅಮೆರಿಕ ಅಧ್ಯಕ್ಷರ ಫೋನ್ ಕರೆಗೂ ಈ ಎರಡೂ ದೇಶಗಳ ರಾಜರು ಕ್ಯಾರೆ ಎಂದಿಲ್ಲ.
ಸೌದಿ ಅರೇಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಮತ್ತು ಸಂಯುಕ್ತ ಅರಬ್ ಒಕ್ಕೂಟದ ಶೇಖ್ ಮಹಮ್ಮದ್ ಬಿನ್ ಜಯಾದ್ ಅಲ್ ನಹ್ಯಾನ್ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಫೋನ್ ಕರೆಯಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.
ರಷ್ಯಾದಿಂದ ಆಮದಾಗುತ್ತಿದ್ದ ತೈಲಕ್ಕೆ ನಿರ್ಬಂಧ ವಿಧಿಸಿದ ಅಮೆರಿಕವು ತೈಲ ಶ್ರೀಮಂತ ರಾಷ್ಟ್ರಗಳಾದ ಸೌದಿ ಅರೇಬಿಯಾ, ಯುಎಇ ಅನ್ನು ಭೇಟಿಯಾಗಲು ಯೋಜನೆ ರೂಪಿಸಿತ್ತು. ಸೌದಿ ಮತ್ತು ಯುಎಇ ಅಧಿಕಾರಿಗಳು ಬೈಡೆನ್ ಆಡಳಿತದೊಂದಿಗೆ ಸಂವಾದ ನಡೆಸಲು ನಿರಾಕರಿಸಿದ್ದಾರೆ.
ರಷ್ಯಾದ ತೈಲ ಆಮದು ರದ್ದುಗೊಳಿಸುತ್ತಿದ್ದಂತೆ ಅಮೆರಿಕವು ತೈಲ ಶ್ರೀಮಂತ ರಾಷ್ಟ್ರ ಸೌದಿ ಅರೇಬಿಯಾ ಮತ್ತು ಯುಎಇನೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಲು ಹರಸಾಹಸಪಟ್ಟಿದೆ. ಆದರೆ ಯುಎಇ ವಿದೇಶಾಂಗ ಸಚಿವಾಲಯವು ಕರೆಯನ್ನು ಮರು ನಿಗದಿಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.