ಇಸ್ಲಮಾಬಾದ್ : ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ, ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.
ಸದನದ ನೂತನ ನಾಯಕರ ಆಯ್ಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿತ್ತು.
ರವಿವಾರದ ಪ್ರಮುಖ ಬೆಳವಣಿಗೆಯಾಗಿ ಬಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮತ್ತು ವಿಪಕ್ಷಗಳ ಇತರ ಮುಖಂಡರೆಲ್ಲ ಸೇರಿ ಶೆಹಬಾಜ್ ಷರೀಫ್ ಅವರನ್ನು ಮೈತ್ರಿಕೂಟದ ಮುಖಂಡರನ್ನಾಗಿ ಆಯ್ಕೆ ಮಾಡಿದ್ದಾರೆ.
ಶನಿವಾರ ರಾತ್ರಿ ಪಾಕಿಸ್ತಾನದ ನ್ಯಾಶನಲ್ ಅಸೆಂಬ್ಲಿಯಲ್ಲಿ ನಡೆದ ಅವಿಶ್ವಾಸ ಮತ ಮಂಡನೆ ಮತದಾನದಲ್ಲಿ ಇಮ್ರಾನ್ ಖಾನ್ ಸೋಲನುಭವಿಸಿದ್ದರು.